ಸ್ಥಗಿತದ ಭೀತಿಯಲ್ಲಿ ಹಂಚು ಕಾರ್ಖಾನೆ; ಅತಂತ್ರದಲ್ಲಿ ಹಂಚು ಕಾರ್ಖಾನೆಯ 2 ಸಾವಿರ ಕಾರ್ಮಿಕರು

ಉಡುಪಿ: ಅಧಿಕಾರಿಗಳ ಅವೈಜ್ಞಾನಿಕ ಮಾದರಿಯ ಕಾನೂನುಗಳಿಂದಾಗಿ ಹಂಚಿನ ಕಾರ್ಖಾನೆಗಳನ್ನು ಸ್ಥಗಿತಗೊಳಿಸುವ ಅನಿವಾರ್ಯತೆ ಎದುರಾಗಿದ್ದು, ಸುಮಾರು 2 ಸಾವಿರ ಕಾರ್ಮಿಕ ಕುಟುಂಬಗಳು ಅತಂತ್ರವಾಗುವ ಆತಂಕದಲ್ಲಿದ್ದಾರೆ ಎಂದು ಕುಂದಾಪುರ ಹಂಚು ಮಾಲೀಕರ ಸಂಘದ ಅಧ್ಯಕ್ಷ ಪ್ರಕಾಶ್ ಟಿ ಸೋನ್ಸ್ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಆವೆ ಮಣ್ಣಿನ ಗಣಿಗಾರಿಕೆ ನಡೆಸಲು ಇಲಾಖೆಗಳು ತುಂಬಾ ಸಮಸ್ಯೆಯನ್ನು ಮಾಡುತ್ತಿದೆ. ದಶಕಗಳಿಂದ ಇಲ್ಲದಿದ್ದ ನಿಯಮಗಳನ್ನು ಹೇರಿ ಕಾರ್ಖಾನೆ ಹಾಗು ಕಾರ್ಮಿಕರಿಗೆ ಸಮಸ್ಯೆಯನ್ನು ಉಂಟು ಮಾಡುತ್ತಿದ್ದಾರೆ. ಆವೆಮಣ್ಣಿನ ಗಣಿಗಾರಿಕೆಯನ್ನು ಫೆಬ್ರವರಿ, ಮಾರ್ಚ್, […]