ಉಡುಪಿ:ವಿಕಲಚೇತನರ ದಿನಾಚರಣೆಗೆ ಅಗತ್ಯ ವ್ಯವಸ್ಥಿತ ಸಿದ್ಧತೆ ಮಾಡಿಕೊಳ್ಳಿ: ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್

ಉಡುಪಿ: ವಿಕಲಚೇತನರ ದಿನಾಚರಣೆಯನ್ನು ಜಿಲ್ಲಾಮಟ್ಟದಲ್ಲಿ ಡಿಸೆಂಬರ್ 3 ರಂದು ಆಚರಿಸಲಾಗುತ್ತಿದ್ದು, ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯವಿರುವ ವ್ಯವಸ್ಥಿತ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹೇಳಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಕೆಸ್ವಾನ್ ವೀಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ನಡೆದ ವಿಕಲಚೇತನರ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲಾಮಟ್ಟದಲ್ಲಿ ಡಿಸೆಂಬರ್ 3 ರಂದು ಬೆಳಗ್ಗೆ 10 ಗಂಟೆಗೆ ನಗರದ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ […]