ಉಡುಪಿ: ಅ.28ರಂದು ಅಂಗವಿಕಲರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಉಡುಪಿ: ಅಂಗವಿಕಲರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಇದೇ ಅ. 28ರಂದು 9.30ಕ್ಕೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ಆಯೋಜಿಸಲಾಗಿದೆ ಎಂದು ಉಡುಪಿ ಜಿಲ್ಲಾ ದಿವ್ಯಾಂಗರ ರಕ್ಷಣಾ ವೇದಿಕೆಯ ಸಂಚಾಲಕ ವಿಜಯ ಕೊಡವೂರು ತಿಳಿಸಿದರು. ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 9.30ಕ್ಕೆ ಮಣಿಪಾಲ ಕಾಯಿನ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಕಾಲ್ನಾಡಿಗೆ ಜಾಥ ನಡೆಯಲಿದೆ. ಬಳಿಕ […]