ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಿ: ಪೌರಾಯುಕ್ತ ರಾಯಪ್ಪ
ಉಡುಪಿ: ಅಂಗವೈಕಲ್ಯತೆಯನ್ನು ದುರ್ಬಲತೆ ಎಂದು ಭಾವಿಸದೇ ಸರ್ಕಾರದಿಂದ ದೊರಕುವ ಸೌಲಭ್ಯಗಳನ್ನು ಸದುಪಯೋಗವನ್ನು ಪಡೆದುಕೊಂಡು, ಪ್ರತಿಯೊಬ್ಬ ಫಲಾನುಭವಿಗಳು ತಮ್ಮ ಕೆಲಸಗಳಿಗಾಗಿ ಯಾರ ಮೇಲೂ ಅವಲಂಭಿತವಾಗದೇ ತಾವೇ ಕಾರ್ಯಗಳನ್ನು ನಿಭಾಯಿಸಲು ಶಕ್ತರಾಗಿ ಸಮಾಜಕ್ಕೆ ಮಾದರಿಯಾಗಬೇಕಿದೆ ಎಂದು ಪೌರಾಯುಕ್ತ ರಾಯಪ್ಪ ಹೇಳಿದರು. ಅವರು ಬುಧವಾರ ಉಡುಪಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ವಿಕಲಚೇತನರ […]