ಉಡುಪಿ: ಹೊಸ ವರ್ಷ ಸಂಭ್ರಮಾಚರಣೆ; ಅಹಿತಕರ ಘಟನೆ ತಡೆಗೆ ಎಸ್‌ಪಿ ವಿಶೇಷ ಸೂಚನೆ
ಉಡುಪಿ: ಜಿಲ್ಲೆಯಲ್ಲಿ ಹೊಸ ವರ್ಷಾಚರಣೆ ಸಂದರ್ಭ ಅಹಿತಕರ ಘಟನೆ ತಡೆಯುವ ಉದ್ದೇಶದಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಅರುಣ್ ಕೆ. ಅವರು ಸಾರ್ವಜನಿಕರಿಗೆ ವಿಶೇಷ ಸೂಚನೆ ನೀಡಿದ್ದಾರೆ. ಹೊಸ ವರ್ಷಾಚರಣೆಗೆ ಡಿ.31ರ ರಾತ್ರಿ 12.30ರ ವರೆಗೆ ಸಮಯ ನಿಗದಿ ಮಾಡಲಾಗಿದೆ. ಶಬ್ದ ಮಾಲಿನ್ಯವಾಗದಂತೆ ಧ್ವನಿವರ್ಧಕಗಳನ್ನು ರಾತ್ರಿ 10 ಗಂಟೆ ವರೆಗೆ ಮಾತ್ರ ಬಳಸಬಹುದು. ನೈತಿಕ ಪೊಲೀಸ್‌ಗಿರಿ, ಅನುಚಿತ ವರ್ತನೆ ನಡೆಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರಗಿಸಲಾಗುವುದು. ನೈತಿಕ ಪೊಲೀಸ್‌ಗಿರಿ ತಡೆಯಲು ಪೊಲೀಸರ ಪ್ರತ್ಯೇಕ ತಂಡ ರಚಿಸಲಾಗಿದೆ ಎಂದಿದ್ದಾರೆ. […]