ಉಡುಪಿ: ಪತ್ನಿ ನಿಧನದ ಬೆನ್ನಲ್ಲೇ ಆಘಾತದಿಂದ ಪತಿ ಮೃತ್ಯು
ಉಡುಪಿ: ಪತ್ನಿ ಮೃತಪಟ್ಟ ಒಂದು ದಿನದಲ್ಲೇ ಅವರ ಪತಿ ಕೂಡ ಆಘಾತಕ್ಕೆ ಒಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಉದ್ಯಾವರದಲ್ಲಿ ನಡೆದಿದೆ. ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯ ಲಾರೆನ್ಸ್ ಡೆಸಾ ಅವರ ಪತ್ನಿ ಶಿಕ್ಷಕಿ ಜುಲಿಯಾನಾ ಡೆಸಾ ಗುರುವಾರ ಅಸೌಖ್ಯದಿಂದಾಗಿ ಮನೆಯಲ್ಲೇ ಮೃತಪಟ್ಟಿದ್ದರು. ಪತ್ನಿಯ ಸಾವಿನಿಂದ ಆಘಾತಕ್ಕೊಳಗಾದ ಪತಿ ಲಾರೆನ್ಸ್ ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇವರೂ ಶುಕ್ರವಾರ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದುಬಂದಿದೆ. ಸ್ಥಳೀಯ ಚರ್ಚಿನ ಪಾಲನಾ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ […]