ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಗೆ ಕಂಪ್ಯೂಟರ್ ಕೊಡುಗೆ
ಉಡುಪಿ ಜೂ11: ಉಡುಪಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಗೆ ಕೋವಿಡ್ 19 ನಿರ್ವಹಣೆಗೆ ಅವಶ್ಯವಿರುವ ಕಂಪ್ಯೂಟರ್ ನ್ನು, ಶಾಸಕ ರಘುಪತಿ ಭಟ್ ಅವರ ಶಿಫಾರಸ್ಸಿನಂತೆ , ಮುದ್ರಾಡಿ ರಾಘವೇಂದ್ರ ಕಲ್ಕೂರ, ಕರ್ನಾಟಕ ಬ್ಯಾಂಕ್ ನ ನಿವೃತ್ತ ಸಿಬ್ಬಂದಿ ಇವರು ಕೊಡುಗೆಯಾಗಿ ನೀಡಿರುತ್ತಾರೆ ಎಂದು ಉಡುಪಿ ತಾಲೂಕು ಆರೋಗ್ಯಾಧಿಕಾರಿ ವಾಸುದೇವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.