ಭಾರೀ ಮಳೆಗೆ ಮನೆಯವರ ಕಣ್ಣೆದುರೇ ಕುಸಿದುಬಿತ್ತು ಗೋಡೆ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಉಡುಪಿ: ಭಾರೀ ಮಳೆಗೆ ಉಡುಪಿ ಕುತ್ಪಾಡಿ ಗ್ರಾಮದ ಕಟ್ಟೆಗುಡ್ಡೆಯ ಶಾರದಾ ಪೂಜಾರ್ತಿ ಎಂಬವರ ಮನೆಯ ಗೋಡೆ ದಿಢೀರ್ ಆಗಿ ಕುಸಿದು ಬಿದ್ದಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಮನೆಯ ಗೋಡೆ ಕುಸಿದು ಬೀಳುತ್ತಿರುವ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಉಡುಪಿಯಲ್ಲಿ ನಿರಂತರ ಸುರಿಯುತ್ತಿರುವ ಮಳೆಗೆ ಮನೆಯ ಗೋಡೆ ಏಕಾಏಕಿಯಾಗಿ ಕುಸಿದುಬಿದ್ದಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಹತ್ತು ನಿಮಿಷದ ಮೊದಲು ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ.