ಮಳೆ, ನೆರೆ; ಜಿಲ್ಲಾಡಳಿತದಿಂದ ಸಮರ್ಥ ನಿರ್ವಹಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಉಡುಪಿ: ಮಳೆಯಿಂದ ಯಾವುದೇ ಅನಾಹುತ ಸಂಭವಿಸದಂತೆ ತಡೆಯಲು ಉಡುಪಿ ಜಿಲ್ಲಾಡಳಿತ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.ಮಳೆಯಿಂದ ಹಾನಿಗೊಳಗಾಗಿರುವ ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಅಧಿಕಾರಗಳೊಂದಿಗೆ ಭಾನುವಾರ ಭೇಟಿ ನೀಡಿದ ಸಚಿವರು, ಮಳೆ ಹಾನಿಯಿಂದ ಆದ ನಷ್ಟದ ಕುರಿತು ಮಾಹಿತಿ ಪಡೆದುಕೊಂಡರು.ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ವಿಧಾನ ಮಂಡಲ ಅಧಿವೇಶನ ನಡೀತಾ ಇದೆ. ಮಳೆ ಪರಿಸ್ಥಿತಿ ಕುರಿತು […]