ಮಳೆಗಾಲದಲ್ಲಿ ಜೀವ ಹಾನಿ ಹಾಗೂ ಆಸ್ತಿ ಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
ಉಡುಪಿ: ಜಿಲ್ಲೆಯಲ್ಲಿ ಮುಂಬರುವ ದಿನಗಳಲ್ಲಿಯೂ ಸಹ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿರುವುದರಿಂದ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದರೊಂದಿಗೆ ಹೆಚ್ಚಿನ ಮಾನವ ಜೀವ ಹಾನಿ ಹಾಗೂ ಆಸ್ತಿ-ಪಾಸ್ತಿಗಳಿಗೆ ಹಾನಿ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾನ್ಸೂನ್ ಮುಂಗಾರು ಮಳೆಯು ಆಗಸ್ಟ್ ಕೊನೆಯವರೆಗೂ ಬರಲಿದೆ, ನೆರೆ-ಪ್ರವಾಹವು […]