ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳಲ್ಲಿ ಪ್ರವಾಹದ ಭೀತಿ ಉಂಟಾಗಿದೆ. ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಉಡುಪಿ ನಗರದ ಗುಂಡಿಬೈಲು, ಬೈಲಕೆರೆ, ಮೂಡನಿಡಂಬೂರು, ಬನ್ನಂಜೆ, ಪಿತ್ರೋಡಿ, ಕಡೆಕಾರು, ಬೊಳ್ಜೆ ಪರಿಸರದಲ್ಲಿ ಕೃತಕ ನೆರೆ ಸೃಷ್ಟಿಯಾಗುವ ಆತಂಕ ಶುರುವಾಗಿದೆ. ನಗರದ ಪ್ರಮುಖ ರಸ್ತೆಗಳಲ್ಲೆ ಮಳೆ ನೀರು ಹರಿಯುತ್ತಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಜಿಲ್ಲೆಯಾದ್ಯಂತ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯ ಮುನ್ಸೂಚನೆ ಇದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. […]