ಮುಂದಿನ 5 ದಿನಗಳ ಕಾಲ ಹೆಚ್ಚು ಮಳೆಯಾಗುವ ಸಾಧ್ಯತೆ: ಕ್ರಮಕ್ಕೆ ಸೂಚನೆ.

ಉಡುಪಿ, ಜೂನ್ 27: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಹಾಗೂ ಮೀನುಗಾರರು ನದಿ, ನೀರಿರುವ ಪ್ರದೇಶ ಹಾಗೂ ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ವಿದ್ಯುತ್ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರಬೇಕು. ದುರ್ಬಲವಾದ ಹಳೆಯ ಕಟ್ಟಡ […]