ಉಡುಪಿ: ಗುಡುಗು ಸಹಿತ ಭಾರಿ ಮಳೆ; ಜನಜೀವನ ಅಸ್ತವ್ಯಸ್ತ

ಉಡುಪಿ: ಉಡುಪಿಯಲ್ಲಿ ಬುಧವಾರ ಸಂಜೆ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಿದ್ದು, ದಿಢೀರ್ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿತು. ಉಡುಪಿ ಜಿಲ್ಲೆಯಾದ್ಯಂತ ಮಧ್ಯಾಹ್ನದಿಂದ ಮೋಡಕವಿದ ವಾತಾವರಣವಿದ್ದು, ಸಂಜೆ 6.30ರ ಸುಮಾರಿಗೆ ಗುಡುಗು ಸಹಿತ ಧಾರಾಕಾರವಾಗಿ ಮಳೆ ಸುರಿದಿದೆ. ದಿಢೀರ್ ಆಗಿ ಸುರಿದ ಮಳೆಗೆ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸವಾರರು ಪರದಾಡುವಂತಾಯಿತು. ಕಾರ್ಕಳ, ಕುಂದಾಪುರ ತಾಲ್ಲೂಕಿನಲ್ಲೂ ಭಾರೀ ವರ್ಷಾಧರೆಯಾಗಿದ್ದು, ಅನಿರೀಕ್ಷಿತ ಮಳೆಗೆ ಜನರು ಪರದಾಡುವಂತಾಯಿತು.