ಹೆಬ್ರಿ ಸರಕಾರಿ ಪ್ರೌಢಶಾಲೆಯ ಶಿಕ್ಷಕ ಪ್ರವೀಣ್ ಕುಮಾರ್ ಶೆಟ್ಟಿ ಅವರಿಗೆ ಉಡುಪಿ ಜಿಲ್ಲಾ ಮಟ್ಟದ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಹೆಬ್ರಿ: ನಿವೃತ್ತ ಶಿಕ್ಷಕ ಹಿರಿಯ ಸಾಹಿತಿ, ಯಕ್ಷಗಾನ ಕಲಾವಿದ, ಹರಿದಾಸ, ಜಿನದಾಸ, ತಾಳಮದ್ದಳೆ ಅರ್ಥದಾರಿ, ನಾಟಕಕಾರ, ಪ್ರಸಂಗಕರ್ತ ಕೀರ್ತಿಶೇಷ ಅಂಬಾತನಯ ಮುದ್ರಾಡಿಯವರ ಸ್ಮರಣಾರ್ಥ ಚಾಣಕ್ಯ ಎಜ್ಯುಕೇಶನ್ ಮತ್ತು ಕಲ್ಚರಲ್ ಅಕಾಡೆಮಿ ಹೆಬ್ರಿ ಇದರ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ನೀಡಲಾಗುವ ಉಡುಪಿ ಜಿಲ್ಲಾ ಮಟ್ಟದ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಈ ಬಾರಿ ಹೆಬ್ರಿ ಸರಕಾರಿ ಪ. ಪೂ. ಕಾಲೇಜಿನ ಪ್ರೌಢಶಾಲೆ ವಿಭಾಗದ ಸಮಾಜ ವಿಜ್ಞಾನ ಶಿಕ್ಷಕ ಬಹುಮುಖ ಪ್ರತಿಭೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಶಿಕ್ಷಣ […]