ಹೆಬ್ರಿ: ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ.

ಹೆಬ್ರಿ: ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಎಚ್.ನಾಗರಾಜ್ ಶೆಟ್ಟಿ ಹಾಗೂ ಕಾರ್ಯದರ್ಶಿಯವರಾದ ಸಪ್ನಾ.ಎನ್. ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕೃಷ್ಣ, ರಾಧೆ ವೇಷಧಾರಿ ಪುಟಾಣಿಗಳ ಮೆರವಣಿಗೆ ನಡೆಯಿತು. ವಿಶೇಷ ಆಕರ್ಷಣೆಯಾಗಿ ಮಗುವನ್ನು ತೊಟ್ಟಿಲಲ್ಲಿ ಹಾಕಿ ತೂಗಿ ಸಂಭ್ರಮಿಸಿದರು. ವಿದ್ಯಾರ್ಥಿಗಳಿಂದ ಕೃಷ್ಣನ ಲೀಲೆಗಳನ್ನು ಬಣ್ಣಿಸುವ ವಿವಿಧ ನೃತ್ಯಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು, ಬಳಿಕ ವಿದ್ಯಾರ್ಥಿಗಳಿಗೆ ಪಂಚಕಜ್ಜಾಯ ವಿತರಿಸಲಾಯಿತು. ಈ ಸಂದರ್ಭ ಎಸ್.ಆರ್ ಪದವಿ ಪೂರ್ವ ಕಾಲೇಜಿನ […]