ಆ.15ರಂದು ಹೆಗ್ಗುಂಜೆ ರಾಜೀವ ಶೆಟ್ಟಿ ಟ್ರಸ್ಟ್ ನ ಆನ್ ಲೈನ್ ವ್ಯಾಸಂಗ- ಸಮಾಲೋಚನೆ ಕೋರ್ಸ್ ಗಳ ಉದ್ಘಾಟನೆ
ಐಐಟಿ ಮದ್ರಾಸ್ ಪ್ರವರ್ತಕ್ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ 20 ಶಾಲೆಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸುವ ನಿಟ್ಟಿನಲ್ಲಿ ತರಗತಿಗಳನ್ನ ನಡೆಸಿಕೊಡುವ ಯೋಜನೆ ಹೆಗ್ಗುಂಜೆ ರಾಜೀವ ಶೆಟ್ಟಿ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದೆ. ಈ ತರಗತಿಗಳು ಆನ್ಲೈನ್ ಲೈವ್ ಮೂಲಕ ನಡೆಯಲಿದ್ದು ನಮ್ಮ ಜಿಲ್ಲೆಯ ವಿದ್ಯಾರ್ಥಿಗಳು ಐಐಟಿ ಯಂತಹ ಸಂಸ್ಥೆಗಳಲ್ಲಿ ಶಿಕ್ಷಣ ಪಡೆಯುವಂತಾಗಬೇಕು ಎನ್ನುವ ನಿಟ್ಟಿನಲ್ಲಿ ಈ ಯೋಜನೆ ಪ್ರಾರಂಭಿಸಿದ್ದೇನೆ ಎಂದು ಉದ್ಯಮಿ ಡಾ. ಎಚ್.ಎಸ್. ಶೆಟ್ಟಿ ಹೇಳಿದರು. ಉಡುಪಿಯ ಪತ್ರಿಕಾಭವನದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ […]