ಉಡುಪಿ: ಹೆಜಮಾಡಿ ಬಂದರು ಕಾಮಗಾರಿ ಶೇ.60ರಷ್ಟು ಪೂರ್ಣಗೊಂಡಿದೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಕಾಪು ವಿಧಾನಸಭಾ ಕ್ಷೇತ್ರದಲ್ಲಿರುವ ಹೆಜಮಾಡಿ ಬಂದರು ಕಾಮಗಾರಿ ಶೇ.60ರಷ್ಟು ಪೂರ್ಣಗೊಂಡಿದೆ. ಹೆಜಮಾಡಿ ಬಂದರು ಅಭಿವೃದ್ಧಿಗೆ 188 ಕೋಟಿ ರೂ.ಅನುದಾನ ಮಂಜೂರಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಬಂದರಿನ ಭೂಸ್ವಾಧೀನ ಪ್ರಕ್ರಿಯೆ ಕುರಿತ ಸಮಾಲೋಚನಾ ಸಭೆಗೆ ತಿಳಿಸಲಾಯಿತು.ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಹೆಜಮಾಡಿ ಬಂದರು ಭೂಸ್ವಾಧೀನ ಪ್ರಕ್ರಿಯೆಗೆ ಇರುವ ಸಮಸ್ಯೆಗಳ ಕುರಿತು ಇಲಾಖಾಧಿಕಾರಿಗಳು ಸಂಸದರಿಗೆ ವಿವರಿಸಿದರು. ಬಂದರಿನ ಭೂ ಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದ ಕಡತಗಳು ಆರ್ಥಿಕ ಇಲಾಖೆಯಲ್ಲಿ […]