ಹಿಜಾಬ್ ವಿವಾದ: ‘ಉತ್ತಮ ಶಿಕ್ಷಕ’ ಪ್ರಶಸ್ತಿ ಹಿಂಪಡೆದಿದ್ದು ಶಿಕ್ಷಕ ಬಂಧುಗಳಿಗೆ ರಾಜ್ಯ ಸರಕಾರ ಮಾಡಿದ ಅಪಮಾನ: ಯಶ್ಪಾಲ್ ಸುವರ್ಣ ಆಕ್ರೋಶ

ಉಡುಪಿ: ಮತೀಯ ಶಕ್ತಿಗಳ ಕುಮ್ಮಕ್ಕಿನಿಂದ ಹಿಜಾಬ್ ವಿವಾದ ಸೃಷ್ಟಿಸಿ ಕಾಲೇಜಿನ ಶಿಕ್ಷಣ ವ್ಯವಸ್ಥೆಗೆ ಧಕ್ಕೆ ತರಲು ಯತ್ನಿಸಿದ ವಿದ್ಯಾರ್ಥಿಗಳ ನಡೆಯನ್ನು ಖಂಡಿಸಿದ ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ. ಜಿ. ರಾಮಕೃಷ್ಣ ರವರಿಗೆ ಶಿಕ್ಷಣ ಇಲಾಖೆಯ ವತಿಯಿಂದ ಆಯ್ಕೆಯಾಗಿದ್ದ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ರಾಜ್ಯ ಸರಕಾರ ಮತೀಯ ಶಕ್ತಿಗಳ ಓಲೈಕೆಗಾಗಿ ಹಿಂಪಡೆಯುವ ಮೂಲಕ ರಾಜ್ಯದ ಸಮಸ್ತ ಶಿಕ್ಷಕ ವೃಂದಕ್ಕೆ ಅಪಮಾನ ಮಾಡಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. […]