ಉಡುಪಿ: ಆ.8 ರಂದು ಭಾರೀ ಮಳೆ ಸಂಭವ: ಶಾಲಾ-ಕಾಲೇಜುಗಳಿಗೆ ರಜೆ
ಉಡುಪಿ: ಜಿಲ್ಲೆಯಲ್ಲಿ ತೀವ್ರ ಮಳೆಯ ಕಾರಣ ರೆಡ್ ಅಲರ್ಟ್ ಘೋಷಿಸಿದ್ದು, ಆಗಸ್ಟ್ 8 ರಂದು ಜಿಲ್ಲೆಯ ಎಲ್ಲ ಶಾಲಾ ಕಾಲೇಜು ಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ. ಬುಧವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಆದರೆ ಬುಧವಾರ ಮಳೆಯ ಪ್ರಭಾವ ಕಡಿಮೆ ಇತ್ತು. ಆದರೆ ಹವಾಮಾನ ಇಲಾಖೆ ಗುರುವರವೂ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯಲಿದೆ ಎನ್ನುವ ಮುನ್ನೆಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಉಳಿದಂತೆ ಮೀನುಗಾರರಿಗೆ,ಕಡಲ ತಡಿಗೆ […]