ಉಡುಪಿ: ‘ಮನೆಯೇ ಗ್ರಂಥಾಲಯ’ ಸುವರ್ಣ ಸಂಭ್ರಮ- ಗಾಂಧಿ ಆಸ್ಪತ್ರೆಯಲ್ಲಿ ಸುಸಜ್ಜಿತ ಗ್ರಂಥಾಲಯ
ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದಿಂದ ನಡೆಯುತ್ತಿರುವ ವಿನೂತನ ಕಾರ್ಯಕ್ರಮ “ಮನೆಯೇ ಗ್ರಂಥಾಲಯ ” ಇದರ ಸುವರ್ಣ ಸಂಭ್ರಮವು ಉಡುಪಿಯ ಗಾಂಧಿ ಆಸ್ಪತ್ರೆಯಲ್ಲಿ ನಡೆಯಿತು. ಕನ್ನಡದ ಪ್ರಸಿದ್ಧ ವಿಮರ್ಶಕ ಪ್ರೊ. ಮುರುಳೀಧರ ಉಪಾಧ್ಯ ಹಿರಿಯಡ್ಕ ಅವರು ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಹರೀಶ್ಚಂದ್ರ ಅವರಿಗೆ ಪುಸ್ತಕಗಳನ್ನು ಹಸ್ತಾಂತರಿಸುವ ಮೂಲಕ ಚಾಲನೆ ನೀಡಿ ಮಾತನಾಡುತ್ತ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಮಾಡುವ ಮೂಲಕ ರೋಗಿಗಳ ಸ್ವಸ್ಥ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ ಎಂದು ತಿಳಿಸಿದರು. ಅಲ್ಲದೆ […]