ಉಡುಪಿ: ಸೆ.15ರಂದು 100 ಕಿ.ಮೀ. ಉದ್ದದ ಮಾನವ ಸರಪಳಿ ರಚನೆ; 1 ಲಕ್ಷ ಜನರು ಭಾಗಿ

ಉಡುಪಿ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸೆ.15ರಂದು 9.30ಕ್ಕೆ ಜಿಲ್ಲೆಯಲ್ಲಿ 100 ಕಿ.ಮೀ. ಉದ್ದದ ಮಾನವ ಸರಪಳಿ ರಚನೆ ಮಾಡಲಿದ್ದೇವೆ. ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸರಕಾರಿ ನೌಕರರು ಸಹಿತ 1 ಲಕ್ಷ ಜನರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದರು. ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜಿಲ್ಲೆಯ ಗಡಿಭಾಗವಾದ ಬೈಂದೂರು ಶಿರೂರಿನಿಂದ ಹೆಜಮಾಡಿ ತನಕ ಸರಪಳಿ ಇರಲಿದೆ. ಉಡುಪಿಯ ಕಿನ್ನಿಮೂಲ್ಕಿ ಸ್ವಾಗತಗೋಪುರದಲ್ಲಿ ರಾಷ್ಟ್ರಧ್ವಜ […]