ಉಡುಪಿ: ಪ್ರಜಾಪ್ರಭುತ್ವದ ಸಂದೇಶ ಸಾರಿದ ಬೃಹತ್ ಮಾನವ ಸರಪಳಿ; ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗಿ

ಉಡುಪಿ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜನರಿಗೆ ತಲುಪಿಸುವ ಮಹತ್ವದ ಉದ್ದೇಶದೊಂದಿಗೆ ಉಡುಪಿ ಜಿಲ್ಲೆಯ ಗಡಿಭಾಗಗಳಾದ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ನಿಂದ ಕಾಪು ತಾಲೂಕಿನ ಹೆಜಮಾಡಿ ಸೇತುವೆ ವರೆಗೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸುಮಾರು 107 ಕಿ. ಮೀ ಉದ್ದದ ಮಾನವ ಸರಪಳಿ ರಚನೆ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪರಸ್ಪರ ಕೈಯನ್ನು ಹಿಡಿದುಕೊಂಡು ಮಾನವ ಸರಪಳಿ ರಚಿಸಿದರು. ಉಡುಪಿ ಕಿನ್ನಿಮೂಲ್ಕಿ ಸ್ವಾಗತ ಗೋಪುರದ ಬಳಿ ಆಯೋಜಿಸಿದ ಜಿಲ್ಲಾಮಟ್ಟದ […]

ಉಡುಪಿ:ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿ ಯಶಸ್ವಿಗೊಳಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯಲ್ಲಿ ಸೆಪ್ಟಂಬರ್ 15 ರಂದು ಪ್ರಜಾಪ್ರಭುತ್ವದ ದಿನದ ಅಂಗವಾಗಿ 100 ಕಿ.ಮೀ. ಮಾನವ ಸರಪಳಿ ನಿರ್ಮಾಣ ಕಾರ್ಯವನ್ನು ಯಶಸ್ವಿಗೊಳಿಸೋಣ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಗುರುವಾರ ಕಾಪು ತಾಲೂಕಿನ ಕುಂಜಾರುಗಿರಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಆಯೋಜಿಸಲಾಗುವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಾರ್ವಜನಿಕರನ್ನು ಉತ್ತೇಜಿಸಲು ಆಯೋಜಿಸಲಾದ ಟ್ರೆಕ್ಕಿಂಗ್‌ನಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ರಾಜ್ಯ ಸರ್ಕಾರವು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಅರ್ಥಗರ್ಭಿತವಾಗಿ ಆಚರಿಸಲು ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಲು ಬೀದರ್‌ನಿಂದ […]