ಉಡುಪಿ:ಈದ್ ಉಲ್ ಫಿತರ್ ಹಬ್ಬದ ಸಂಭ್ರಮ

ಉಡುಪಿ: ಈದ್ ಉಲ್ ಫಿತರ್ ಹಬ್ಬದ ಪ್ರಯುಕ್ತ ಉಡುಪಿ ಧರ್ಮಪ್ರಾಂತ್ಯದ ಕೆಥೊಲಿಕ್‌ಸಭಾ ಪದಾಧಿಕಾರಿಗಳು ಬುಧವಾರ ಮಸೀದಿಗೆ ತೆರಳಿ ಮುಸ್ಲಿಂ ಬಾಂಧವರೊಂದಿಗೆಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ಪದಾಧಿಕಾರಿಗಳು ಉಡುಪಿಯ ಜಾಮೀಯಾ ಮಸೀದಿಗೆ ತೆರಳಿ ಮುಸ್ಲಿಂ ಸಮುದಾಯದ ಧರ್ಮಗುರುಗಳು ಹಾಗೂ ಮುಸ್ಲಿಂ ಬಾಂಧವರೊಂದಿಗೆ ಹಸಿರು ಗಿಡ ನೀಡುವ ಮೂಲಕ ಈದ್ ಹಬ್ಬದ ಶುಭಾಶಯಗಳನ್ನು ಕೋರಿದರು.ಈ ಸಂದರ್ಭದಲ್ಲಿ ಮಾತನಾಡಿದ ಕೆಥೊಲಿಕ್ ಸಭಾ ಉಡುಪಿ ಪ್ರದೇಶ್‌ನ ಆಧ್ಯಾತ್ಮಿಕನಿರ್ದೇಶಕ ಫರ್ಡಿನಾಂಡ್ ಗೊನ್ಸಾಲ್ವಿಸ್, ಸೌಹಾರ್ದತೆಯನ್ನು ಕಾಯ್ದುಕೊಳ್ಳುವುದು ಇಂದಿನ ಅಗತ್ಯವಾಗಿದೆ ಎಂದರು.ಈ ವೇಳೆ ಕೆಥೊಲಿಕ್ […]