ಪ್ಲಾಸ್ಟಿಕ್ ಹಾಳೆ ಬಳಸಿ ಇಡ್ಲಿ ತಯಾರಿಕೆ; ಇನ್ಮುಂದೆ ಹೋಟೆಲ್, ಉಪಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ.!

ಬೆಂಗಳೂರು: ಪ್ಲಾಸ್ಟಿಕ್ ಹಾಳೆ ಬಳಸಿ ತಯಾರಿಸಿದ ಇಡ್ಲಿ ಅಸುರಕ್ಷಿತ ಎನ್ನುವುದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಡೆಸಿದ ಪರೀಕ್ಷೆಯಿಂದ ದೃಢಪಟ್ಟಿದೆ. ಅದರ ಬೆನ್ನಲ್ಲೇ, ಪ್ಲಾಸ್ಟಿಕ್ ಬಳಕೆಯನ್ನು ಇಲಾಖೆ ನಿಷೇಧಿಸಿದೆ. ಈ ಬಗ್ಗೆ ಸುದ್ದಿಗಾರರಿಗೆ ಗುರುವಾರ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ‘ಹಿಂದೆ ಬಟ್ಟೆ ಉಪಯೋಗಿಸಿ ಇಡ್ಲಿ ತಯಾರಿಸುತ್ತಿದ್ದರು. ಪ್ಲಾಸ್ಟಿಕ್ ಹಾಳೆಗಳನ್ನು ಈಗ ಉಪಯೋಗಿಸಲಾಗುತ್ತಿದೆ. ಇಲಾಖೆಯ ಅಧಿಕಾರಿಗಳು 251 ಸ್ಥಳಗಳಲ್ಲಿ ಪರಿಶೀಲಿಸಿ, ಪರೀಕ್ಷೆ ಮಾಡಿದ್ದಾರೆ. 52 ಕಡೆ ಪ್ಲಾಸ್ಟಿಕ್ ಹಾಳೆ ಬಳಸಿ ಇಡ್ಲಿ ಬೇಯಿಸಿರುವುದು ಗಮನಕ್ಕೆ […]