ಅಕ್ರಮ ಬಾಂಗ್ಲಾ ವಲಸಿಗರ ಜಾಲದ ಬಗ್ಗೆ ಎನ್ಐಎ ತನಿಖೆ ನಡೆಸಿ: ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ

ಉಡುಪಿ: ಮಲ್ಪೆಯಲ್ಲಿ 7 ಮಂದಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ದೇಶದ ಪ್ರಜೆಗಳನ್ನು ಬಂಧಿಸಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕೇಂದ್ರ ಸರಕಾರ ಎನ್ ಐ ಎ ಮೂಲಕ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಪತ್ರ ಬರೆದು ಮನವಿ ಮಾಡಿದ್ದಾರೆ. ಕರಾವಳಿ ಜಿಲ್ಲೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಅಕ್ರಮವಾಗಿ ಬಾಂಗ್ಲಾ ಪ್ರಜೆಗಳು ನೆಲೆಸಿರುವ ಬಗ್ಗೆ ಪೊಲೀಸ್ ಇಲಾಖೆಯ ಪ್ರಾಥಮಿಕ ತನಿಖೆಯಲ್ಲಿ ಕಂಡು ಬರುತ್ತಿದ್ದು, ಕರಾವಳಿ ಭಾಗದ ಜನತೆ ಇದರಿಂದ […]