ಉಡುಪಿ: ‘ಭೂ ಸುಧಾರಣಾ ಕಾಯ್ದೆಯ’ ಸುವರ್ಣ ಮಾಹೋತ್ಸವ ಉದ್ಘಾಟನೆ
ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಆಶ್ರಯದಲ್ಲಿ ‘ಭೂ ಸುಧಾರಣಾ ಕಾಯ್ದೆಯ’ ಸುವರ್ಣ ಮಾಹೋತ್ಸವ ಹಿರಿಯಡಕ ಗಾಂಧಿ ಮೈದಾನದಲ್ಲಿ ಶನಿವಾರ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಭಾರತದಲ್ಲಿ ಸಂವಿಧಾನ ಜಾರಿಯಾಗಿ 72 ವರ್ಷ ಕಳೆದರೂ, ಆರ್ಥಿಕ, ಸಾಮಾಜಿಕ ಸಮಾನತೆ ಸಾಧಿಸಲು ಆಗಿಲ್ಲ. ಸಮಸಮಾಜ ನಿರ್ಮಾಣ ಇನ್ನೂ ಆಗಿಲ್ಲ. ಅವಕಾಶಗಳಿಂದ ವಂಚಿತರಾದ ಜನರಿಗೆ ಅವಕಾಶ ಕಲ್ಪಿಸಿಕೊಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಬೇಕು ಎಂದರು. ಅಂದಿನ ಇಂದಿರಾ ಗಾಂಧಿ ಸರ್ಕಾರವು ಜಾರಿಗೊಳಿಸಿದ ಉಳುವವನೇ ಭೂಮಿಯ ಒಡೆಯ […]