ಉಡುಪಿ: ಜನವರಿ 10 ರಿಂದ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ವಾಹನ ಬಳಕೆಗೆ ಅನುವು ಮಾಡಿಕೊಡಿ: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ: ರಾಷ್ಟೀಯ ಹೆದ್ದಾರಿಯ ಇಂದ್ರಾಳಿ ಬಳಿಯ ರೈಲ್ವೇ ಮೇಲೆ್ಸೀತುವೆ ಕಾಮಗಾರಿಯನ್ನು ಪೂರ್ಣಗೊಳಿಸಿ, ಜನವರಿ 10 ರಿಂದ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಅಭಿಯಂತರರಿಗೆ ಹಾಗೂ ಗುತ್ತಿಗೆದಾರರಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ 169 ಎ ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಪ್ರಗತಿ ಪರಿಶೀಲನೆ ಕುರಿತು ಚರ್ಚಿಸುವ ಸಲುವಾಗಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಇಂದ್ರಾಳಿ ರೈಲ್ವೆ […]