ಉಡುಪಿ: ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿಗೆ ಮುಕ್ತಿ ಯಾವಾಗ?

ಉಡುಪಿ: ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಇಂದ್ರಾಳಿ ರೈಲ್ವೇ ಸೇತುವೆ ಕಾಮಗಾರಿಗೆ ಮುಕ್ತಿ ಯಾವಾಗ ಎಂಬ ಪ್ರಶ್ನೆ ಉಡುಪಿ ಜನರನ್ನು ಕಾಡುತ್ತಿದೆ. ರೈಲ್ವೆ ಸೇತುವೆ ಗರ್ಡರ್ ಬಂದ ತಿಂಗಳೊಳಗೆ ಕಾಮಗಾರಿ ಶುರುವಾಗಿ ಎರಡು ಮೂರು ತಿಂಗಳಲ್ಲಿ ಸೇತುವೆ ಸಂಚಾರ ಮುಕ್ತವಾಗಲಿದೆ ಎಂದು ಜನ ಪ್ರತಿನಿಧಿಗಳು, ಅಧಿಕಾರಿಗಳು ವರ್ಷದ ಹಿಂದೆಯೇ ಹೇಳಿದ್ದರು. ಆದರೆ, ಇಲ್ಲಿನ ಸ್ಥಿತಿಯೇ ಬೇರೆಯಿದೆ. ಗರ್ಡರ್ ಬಂದು ವರ್ಷ ಕಳೆದರೂ ಕಾಮಗಾರಿ ಮಾತ್ರ ಮುಂದೆ ಹೋಗುತ್ತಲೇ ಇಲ್ಲ. ಕಾರಣ ಒಂದು ನಟ್, ಬೋಲ್ಡ್ ಫಿಟ್ ಮಾಡಲೂ […]