ಸಾರ್ವಜನಿಕರು ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ: ಜಿಲ್ಲಾಧಿಕಾರಿ ಡಾ.ಕೆ ವಿದ್ಯಾ ಕುಮಾರಿ

ಉಡುಪಿ: ಜಿಲ್ಲೆಯಲ್ಲಿ ಬಿಟ್ಟು ಬಿಟ್ಟುಮಳೆಯಾಗುತ್ತಿರುವುದರಿಂದ ಹಾಗೂ ವಿಪರೀತ ಉಷ್ಣಾಂಶದ ಹಿನ್ನಲೆ ಹವಾಮಾನ ಬದಲಾವಣೆಯಿಂದ ಸೊಳ್ಳೆಗಳಿಂದ ಹರಡುವಸಾಂಕ್ರಾಮಿಕ ರೋಗಗಳಾದ ಮಲೇರಿಯಾ, ಡೆಂಗ್ಯೂ,ಚಿಕುನ್ ಗುನ್ಯಾ ಮತ್ತು ಮೆದುಳು ಜ್ವರ ಪ್ರಕರಣಗಳು ಹೆಚ್ಚಾಗಿ ಕಂಡು ಬರುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಸಾಂಕ್ರಾಮಿಕ ರೋಗಗಳಿಂದ ಸುರಕ್ಷಿತರಾಗಿರಲು ಬೇಕಾದಂತಹ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ, ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಎಚ್ಚರವಹಿಸಬೇಕು. 2025 ರ ವೇಳೆಗೆ ಕರ್ನಾಟಕ ರಾಜ್ಯವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿಯನ್ನು ಸಾಧಿಸಬೇಕಾಗಿರುವುದರಿಂದ ಎಲ್ಲ ಹಂತಗಳಲ್ಲೂ ಮಲೇರಿಯಾ ನಿವಾರಣಾ ಚಟುವಟಿಕೆಗಳನ್ನುಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. […]