ಉಡುಪಿ: ಡೈರಿ ಫಾರ್ಮ್, ಗೋಶಾಲೆಗಳ ನೋಂದಣಿಗೆ ಸೂಚನೆ
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿರುವ ಹೈನುಗಾರಿಕೆ ತಾಣಗಳು ಹಾಗೂ ಗೋಶಾಲೆಗಳ ಬಗ್ಗೆ ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಜಿಲ್ಲೆಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸಲ್ಲಿಸಬೇಕು ಎಂದು ನಗರಸಭೆಯ ಪೌರಾಯುಕ್ತ ಆನಂದ್ ಕಲ್ಲೋಳಿಕರ್ ಸೂಚಿಸಿದ್ದಾರೆ. ನಗರಸಭಾ ವ್ಯಾಪ್ತಿಯಲ್ಲಿರುವ ಎಲ್ಲಾ ಹೈನುಗಾರಿಕೆ ತಾಣಗಳು ಹಾಗೂ ಗೋಶಾಲೆಗಳು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆನ್‌ಲೈನ್ ಮೂಲಕ ನೊಂದಣಿ ಮಾಡಿಕೊಳ್ಳಬೇಕು ಅಥವಾ ಆನ್‌ಲೈನ್ ನೋಂದಣಿ ಮಾಡಿಕೊಳ್ಳುವವರೆಗೆ ಆಫ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. 10 ಕ್ಕಿಂತ ಹೆಚ್ಚು ಪ್ರಾಣಿಗಳನ್ನು ಹೊಂದಿರುವ ಡೈರಿ ಫಾರ್ಮ್ ಗಳು ಹಾಗೂ […]