ಉಡುಪಿ: ಅಂತರ್ ಜಿಲ್ಲಾ ಕಳ್ಳನ ಬಂಧನ; ₹4.33 ಲಕ್ಷ ನಗದು, ಎರಡು ಬೈಕ್ ವಶ

ಉಡುಪಿ: ನಗರದ ಮಂಜುನಾಥ ಕಣ್ಣಿನ ಆಸ್ಪತ್ರೆಯಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಭೇದಿಸಿದ ಉಡುಪಿ ನಗರ ಠಾಣಾ ಪೊಲೀಸರು ಓರ್ವ ಅಂತರ್ ಜಿಲ್ಲಾ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಕಳ ತಾಲೂಕಿನ ಸುರೇಶ್‌ ಪೂಜಾರಿ ಬಂಧಿತ ಆರೋಪಿ. ಈತನನ್ನು ಉಡುಪಿ ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣದ ಬಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಒಟ್ಟು ₹4.33 ಲಕ್ಷ ನಗದು, ಎರಡು ಬೈಕ್, ಎರಡು ಮೊಬೈಲ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಏನಿದು ಪ್ರಕರಣ: ಇತ್ತೀಚೆಗೆ ಉಡುಪಿ ನಗರದ ಮಂಜುನಾಥ ಕಣ್ಣಿನ ಆಸ್ಪತ್ರೆಯ ಶೆಟರ್‌ನ ಬೀಗ […]