ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೃಹತ್ ಮಾನವ ಸರಪಳಿ :ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ
ಉಡುಪಿ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜನಸಾಮಾನ್ಯರಿಗೆ ಪಸರಿಸಲು ಬೃಹತ್ ಮಾನವ ಸರಪಳಿಯನ್ನು ಸೆಪ್ಟಂಬರ್ 15 ರಂದು ಒಂದು ಲಕ್ಷಕ್ಕೂ ಹೆಚ್ಚು ಜನರು ನಿರ್ಮಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ಡಾ.ವಿ. ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಜಿಲ್ಲೆಯಾದ್ಯಂತ ಮಾನವಸರಪಳಿ ಆಯೋಜಿಸುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.ವಿಶ್ವದಲ್ಲಿಯೇ ಅತಿ ದೊಡ್ಡ ಪ್ರಜಾಪ್ರಭುತ್ವವನ್ನು ನಾವು ಹೊಂದಿದ್ದೇವೆ. ಯುವಪೀಳಿಗೆಗೆ ಪ್ರಜಾಪ್ರಭುತ್ವದ […]