ಉಡುಪಿ: ಐ.ಟಿ.ಐ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯ ಮಣಿಪಾಲ್‌ನ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ವಿವಿಧ ವೃತ್ತಿಗಳಲ್ಲಿ ಪ್ರಸಕ್ತ ಸಾಲಿನ ಪ್ರವೇಶಾಕ್ಕಾಗಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ www.emptrg.kar.nic.in ಆನ್‌ಲೈನ್ ಮೂಲಕ  ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 27 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸ.ಕೈ.ತ.ಸಂಸ್ಥೆ, ಪ್ರಗತಿ ನಗರ ಮಣಿಪಾಲ್ ಉಡುಪಿ ಅಥವಾ ದೂರವಾಣಿ ಸಂಖ್ಯೆ: 0820-2986145 ನ್ನು ಸಂಪರ್ಕಿಸುವಂತೆ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.