ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ: ಜನಸಾಮಾನ್ಯರು ಸಣ್ಣ-ಪುಟ್ಟ ಸಮಸ್ಯೆಗಳಿಂದ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸುವ ನಿಟ್ಟಿನಲ್ಲಿ ತಾಲೂಕು ಮಟ್ಟದಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಿದ್ದು, ಸಾರ್ವಜನಿಕರು ಮುಕ್ತವಾಗಿ ಭಾಗವಹಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಬನ್ನಂಜೆಯ ಬಿಲ್ಲವ ಸೇವಾ ಸಂಘದ ನಾರಾಯಣ ಗುರು ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ನಗರಸಭೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ತಾಲೂಕು ಮಟ್ಟದ ಜನಸ್ಪಂದನ ಸಭೆಯ […]