ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ವಿರೋಧ: ಇಂದು ಜೆಡಿಎಸ್ ನಿಂದ ಡಿಸಿ ಕಚೇರಿ ಎದುರು ಪ್ರತಿಭಟನೆ

ಉಡುಪಿ: ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ಕಾರ್ಮಿಕ ಕಾಯ್ದೆಗಳಿಗೆ ರಾಜ್ಯ ಸರ್ಕಾರವು ಸುಗ್ರೀವಾಜ್ಞೆ ಮೂಲಕ ತಂದಿರುವ ತಿದ್ದುಪಡಿಯನ್ನು ವಿರೋಧಿಸಿ ಉಡುಪಿ ಜಿಲ್ಲಾ ಜೆಡಿಎಸ್ ವತಿಯಿಂದ ಇಂದು (ಆಗಸ್ಟ್ 18) ಬೆಳಿಗ್ಗೆ 11.15ಕ್ಕೆ ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.