ಅ.22ರಂದು ಉಡುಪಿ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ ‘ರಜತ ಕ್ರೀಡಾ ಸಂಭ್ರಮ’
ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ರಜತ ಮಹೋತ್ಸವದ ಪ್ರಯುಕ್ತ ‘ರಜತ ಕ್ರೀಡಾ ಸಂಭ್ರಮ’ ವಾರ್ಷಿಕ ಕ್ರೀಡಾಕೂಟವನ್ನು ಅ.22ರಂದು ಅಜ್ಜರಕಾಡು ವಿನಲ್ಲಿರುವ ಉಡುಪಿ ಜಿಲ್ಲಾ ಕ್ರೀಡಾಂಗಣ ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ತಿಳಿಸಿದ್ದಾರೆ. ಉಡುಪಿ ಪತ್ರಿಕಾ ಭವನದಲ್ಲಿ ಬುಧವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘವು ರಜತ ಸಂಭ್ರಮದ ಹಿನ್ನೆಲೆಯಲ್ಲಿ ಈ ಬಾರಿಯ ಕ್ರೀಡಾಕೂಟವನ್ನು ಅದ್ದೂರಿ ಹಾಗೂ ವಿಶಿಷ್ಟ ರೀತಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಬೆಳಗ್ಗೆ […]