ಉಡುಪಿ ಪತ್ರಕರ್ತರ ‘ರಜತ ಕ್ರೀಡಾ ಸಂಭ್ರಮ’ದ ಜೆರ್ಸಿ ಅನಾವರಣ

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ ‘ರಜತ ಕ್ರೀಡಾ ಸಂಭ್ರಮ’ ಇದರ ಒಂಭತ್ತು ಬಣ್ಣಗಳ ಜೆರ್ಸಿ ಅನಾವರಣ ಕಾರ್ಯಕ್ರಮವನ್ನು ಶನಿವಾರ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಅತಿಥಿಯಾಗಿ ಆಗಮಿಸಿದ ಅಂತಾರಾಷ್ಟ್ರೀಯ ಕಿವುಡರ ವಿಶ್ವ ಕಪ್ ಕ್ರಿಕೆಟ್ ಪಂದ್ಯಾಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಹಾಗೂ ಪ್ರಸ್ತುತ ಕರ್ನಾಟಕ ತಂಡದ ನಾಯಕ ಕುಂದಾಪುರದ ಪೃಥ್ವಿರಾಜ್ ಶೆಟ್ಟಿ ಅನಾವರಣ ಗೊಳಿಸಿದರು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಿದ್ದರು. ಉಡುಪಿ ಜಿಲ್ಲಾ ಸ್ಕೌಟ್ಸ್ ಆಯುಕ್ತ […]