ಉಡುಪಿ: ನಾಳೆಯ (ಜೂನ್ 21) ಕೋವಿಡ್ ಲಸಿಕೆ ವಿವರ
ಉಡುಪಿ: ಜಿಲ್ಲೆಯಲ್ಲಿ ನಾಳೆ (ಜೂನ್ 21) ಕೋವಿಡ್-19 ಲಸಿಕಾ ಮಹಾಮೇಳ ನಡೆಯಲಿದೆ. ಮಹಾಮೇಳದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳಿಗೆ/ಆದ್ಯತಾಗುಂಪಿನವರಿಗೆ ಮತ್ತು ಆರೋಗ್ಯ ಕಾರ್ಯಕರ್ತರುಗಳಿಗೆ/ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರುಗಳಿಗೆ ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಪ್ರಥಮ ಡೋಸ್ ಮತ್ತು 2ನೇ ಡೋಸ್ ಲಸಿಕೆಯನ್ನು ನೀಡಲಾಗುವುದು. ಒಟ್ಟು 21,000 ಕೋವಿಡ್-19 ಲಸಿಕೆಯನ್ನು ನೀಡುವ ಗುರಿಯನ್ನು ಹೊಂದಲಾಗಿದೆ. ಜಿಲ್ಲಾ ಮಟ್ಟದ ಕೋವಿಡ್-19 ಲಸಿಕಾಕರಣದ ಮಹಾ ಮೇಳದ ಉದ್ಘಾಟನೆಯು ಹನುಮಂತನಗರ ಸರಕಾರಿ […]