ರೋಟರಿ ಉಡುಪಿಯಿಂದ ಕಡಿಯಾಳಿ ಶಾಲೆ ವಿದ್ಯಾರ್ಥಿಗಳ ದತ್ತು ಸ್ವೀಕಾರ
ಉಡುಪಿ: ರೋಟರಿ ಉಡುಪಿ ಯಿಂದ ಪ್ರತಿ ವರ್ಷದಂತೆ ಕಡಿಯಾಳಿ ಹಿರಿಯ ಪ್ರಾಥಮಿಕ ಶಾಲೆಯ ಒಂದರಿಂದ ಏಳನೇ ತರಗತಿಯ 21 ವಿದ್ಯಾರ್ಥಿ ಗಳನ್ನು ದತ್ತು ಸ್ವೀಕರಿಸಿ ಅವರ ಸಂಪೂರ್ಣ ಶೈಕ್ಷಣಿಕ ಖರ್ಚ ನ್ನು ನೀಡುವ ಕಾರ್ಯಕ್ರಮ ಇತ್ತೀಚಿಗೆ ಜರಗಿತು. ಮಾಜಿ ಅಸಿಸ್ಟೆಂಟ್ ಗವರ್ನರ್ ರೋ.ರಾಮಚಂದ್ರ ಉಪಾಧ್ಯಾಯರು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತಾಡುತ್ತಾ ರೋಟರಿ ಉಡುಪಿಯ ಈ ಕಾರ್ಯಕ್ರಮಕ್ಕಾಗಿ ಅವರನ್ನು ಅಭಿನಂದಿಸಿ, ಈ ಸಹಾಯವು ವಿದ್ಯಾರ್ಥಿಗಳಿಗೆ ಅವರ ವಿದ್ಯಾಭ್ಯಾಸ ಮುಂದುವರಿಸಲು ತುಂಬಾ ಸಹಕಾರಿಯಾಗಿದ್ದು ವಿದ್ಯಾರ್ಥಿಗಳು ಉತ್ತಮ ಪ್ರಗತಿಯನ್ನು ತೊರಿಸಬೇಕೆಂದು ಕರೆನೀಡಿದರು. […]