ಉಡುಪಿ: ಕಡಿಯಾಳಿಯ ಅಂಗನವಾಡಿ ಕೇಂದ್ರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ.

ಉಡುಪಿ: ಉಡುಪಿ ನಗರದ ಕಡಿಯಾಳಿ ಅಂಗನವಾಡಿ ಕೇಂದ್ರಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಂಗನವಾಡಿಯ ಸುತ್ತಮುತ್ತಲಿನ ಪರಿಸರ, ಮಕ್ಕಳ ತರಗತಿ ಗೃಹ, ಅಡುಗೆ ಕೋಣೆ, ದಾಸ್ತಾನು ಕೊಠಡಿ ಸೇರಿದಂತೆ ಮತ್ತಿತರ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕರಿಗೆ ಕಟ್ಟಡದ ಸುತ್ತಮುತ್ತಲಿನ ಪರಿಸರವನ್ನು ಉತ್ತಮವಾಗಿ ಇಟ್ಟುಕೊಳ್ಳಬೇಕು. ಇತ್ತೀಚಿನ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ತಾಣವಾಗುವ ಸಾಧ್ಯತೆ […]