ಉಡುಪಿ: ಜಿಲ್ಲೆಯಲ್ಲಿ ಕಾಲರಾ ಭೀತಿ: ಸಾರ್ವಜನಿಕರು ಸ್ವಚ್ಛತೆಗೆ ಆದ್ಯತೆ ನೀಡಿ :ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ
ಉಡುಪಿ: ಜಿಲ್ಲೆಯ ಕೆಲವು ಭಾಗಗಳಲ್ಲಿ ಕಾಲರಾ ಪ್ರಕರಣಗಳು ಕಂಡುಬಂದಿದ್ದು, ಸಾರ್ವಜನಿಕರು ಈ ಬಗ್ಗೆ ಎಚ್ಚರದಿಂದ ಇದ್ದು ಸ್ವಚ್ಛತೆಗೆ ಆದ್ಯತೆ ನೀಡಿದ್ದಲ್ಲಿ, ಕಾಲರಾ ರೋಗದಿಂದ ದೂರವಿರಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು. ಅವರು ಬುಧವಾರ ನಗರದ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕಣ್ಗಾವಲು ಸಮಿತಿ ಸಭೆಹಾಗೂ ಡೆಂಗ್ಯೂ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಕಳೆದ ವಾರದಲ್ಲಿ 11 ಕಾಲರಾ ಪ್ರಕರಣಗಳು ವರದಿಯಾಗಿದ್ದು, ಕಾರ್ಕಳದ ಈದು ಪ್ರಾಥಮಿಕ ಆರೋಗ್ಯ ಕೇಂದ್ರದ […]