ನನ್ನ ಅವಧಿಯಲ್ಲಿ ಟೆಂಡರ್ ಆಗಿರುವ ಟ್ರಾಫಿಕ್ ಸಿಗ್ನಲ್ ಯೋಜನೆಗೆ ಶಾಸಕರಿಂದ ತಡೆ

ಉಡುಪಿ: ವಾಹನ ದಟ್ಟಣೆಯ ಹೆಸರಿನಲ್ಲಿ ಉಡುಪಿಯ ಕಲ್ಸಂಕ ಜಂಕ್ಷನ್ ಅನ್ನು ಬ್ಯಾರಿಕೇಡ್ ಹಾಕಿ ಮುಚ್ಚಿರುವುದು ಅವೈಜ್ಞಾನಿಕ. ಈಗಾಗಲೇ ಟೆಂಡರ್ ಆಗಿರುವ ಟ್ರಾಫಿಕ್ ಸಿಗ್ನಲ್ ಯೋಜನೆ ಅನುಷ್ಠಾನಗೊಳಿಸಿ ಟ್ರಾಫಿಕ್ ಸಮಸ್ಯೆ ಪರಿಹರಿಸಬೇಕಿತ್ತು. ಆದರೆ ನನ್ನ ಅವಧಿಯಲ್ಲಿ ಟೆಂಡರ್ ಆಗಿದೆ ಎಂಬ ಕಾರಣಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಈ ಯೋಜನೆಗೆ ತಡೆಯೊಡ್ಡುತ್ತಿದ್ದಾರೆ ಎಂದು ಮಾಜಿ ಶಾಸಕ ಕೆ. ರಘುಪತಿ ಭಟ್ ಆರೋಪಿಸಿದರು. ಉಡುಪಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ರೀತಿಯ ಸಾರ್ವಜನಿಕ ಪ್ರಕಟಣೆ ಹೊರಡಿಸದೆ, ಗಜೆಟ್ […]