ಟ್ರಾಫಿಕ್ ಸಮಸ್ಯೆ ನೀಗಿಸಲು ಕಲ್ಸಂಕ ದಲ್ಲಿ ಸ್ಟೀಲ್ ಬ್ರಿಡ್ಜ್ ನಿರ್ಮಾಣ: ಯಶ್ ಪಾಲ್ ಸುವರ್ಣ

ಉಡುಪಿ: ಉಡುಪಿ ನಗರದ ಪ್ರಮುಖ ರಸ್ತೆ ಹಾಗೂ ಜಂಕ್ಷನ್ ಗಳಲ್ಲಿ ಉಂಟಾಗುತ್ತಿರುವ ಟ್ರಾಫಿಕ್ ಸಮಸ್ಯೆ ಕುರಿತು ಉಡುಪಿ ನಗರಸಭೆಯ ಸಭಾಂಗಣದಲ್ಲಿ ಇಂದು ನಡೆದ ಸಾಮಾನ್ಯ ಸಭೆಯಲ್ಲಿ ಚರ್ಚೆ ನಡೆಯಿತು. ಮೊದಲಿಗೆ ವಿಷಯ ಪ್ರಸ್ತಾಪಿಸಿದ ಆಡಳಿತ ಪಕ್ಷದ ಸದಸ್ಯ ವಿಜಯ ಕೊಡವೂರು ಅವರು, ಅಂಬಲಪಾಡಿ ಜಂಕ್ಷನ್ನಲ್ಲಿನ ಮೇಲ್ಸೇತುವೆ ಕಾಮಗಾರಿಯಿಂದ ಕರಾವಳಿ ಬೈಪಾಸ್, ಸಿಟಿ ಬಸ್ ನಿಲ್ದಾಣ ಹಾಗೂ ಕಲ್ಸಂಕಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿ ಪ್ರತಿದಿನ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಆದರೆ ಟ್ರಾಫಿಕ್ ನಿರ್ವಹಣೆಯನ್ನು ಸರಿಯಾಗಿ ಮಾಡದೆ ತೊಂದರೆ ಆಗುತ್ತಿದೆ […]