ಪಡುಬಿದ್ರಿ – ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಟೋಲ್ ಗೇಟ್ ವಿರುದ್ಧ ಬೃಹತ್ ಪ್ರತಿಭಟನೆ
ಉಡುಪಿ: ಪಡುಬಿದ್ರಿ – ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಟೋಲ್ ಸಂಗ್ರಹಣಾ ಕೇಂದ್ರವನ್ನು ಶಾಶ್ವತವಾಗಿ ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಕಂಚಿನಡ್ಕದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು. ಜಿಲ್ಲೆಯ ವಿವಿಧ ಸಂಘಟನೆಗಳು, ಕಾಪು, ಕಾರ್ಕಳ, ಉಡುಪಿ, ಮೂಲ್ಕಿ ತಾಲೂಕು ಮತ್ತು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜನಪ್ರತಿನಿಧಿಗಳು, ರಾಜಕೀಯ ಪಕ್ಷಗಳ ಮುಖಂಡರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸುತ್ತಲಿನ 40 ಗ್ರಾಮಗಳ ಸಾರ್ವಜನಿಕರು ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಸಭೆಯ ಬಳಿಕ ಕಂಚಿನಡ್ಕದಿಂದ ಪಡುಬಿದ್ರಿ ಜಂಕ್ಷನ್ ವರೆಗೆ ಜಾಥಾ ನಡೆಯಿತು. ಉಡುಪಿ […]