ಉಡುಪಿ: ಶೇ.60ರಷ್ಟು ಕನ್ನಡ ಬಳಕೆ ಮಾಡದ ನಾಮಫಲಕಗಳಿಗೆ ಮಸಿ ಬಳಿಯುತ್ತೇವೆ: ಕರ್ನಾಟಕ ಯುವರಕ್ಷಣಾ ವೇದಿಕೆ ಎಚ್ಚರಿಕೆ

ಉಡುಪಿ: ಉಡುಪಿ ನಗರದ ಅಂಗಡಿ ಮುಂಗಟ್ಟು, ಶೋರೂಂ, ಹೊಟೇಲ್‌ಗಳು ಮತ್ತು ಶಾಲಾ ಕಾಲೇಜುಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಮಾಡಬೇಕು. ಒಂದು ತಿಂಗಳ ಗಡುವು ನೀಡುತ್ತೇವೆ. ಆ ಬಳಿಕವೂ ಅಳವಡಿಕೆ ಮಾಡದಿದ್ದರೆ ಪೊಲೀಸರಿಗೆ ಮಾಹಿತಿ ನೀಡಿ ಅಂತಹ ಫಲಕಗಳಿಗೆ ಮಸಿ ಬಳಿಯುವ ಕೆಲಸ ಮಾಡುತ್ತೇವೆ ಎಂದು ಕರ್ನಾಟಕ ಯುವರಕ್ಷಣಾ ವೇದಿಕೆ ಎಚ್ಚರಿಕೆ ನೀಡಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಯುವರಕ್ಷಣಾ ವೇದಿಕೆಯ ರಾಜ್ಯ ಪ್ರಚಾರ ಸಮಿತಿ ಕಾರ್ಯದರ್ಶಿ ಸಂದೀಪ್ ಮಾತನಾಡಿ, ರಾಜ್ಯ ಸರಕಾರ ಕನ್ನಡ ಭಾಷೆ ಅಳವಡಿಸಲು […]