ಉಡುಪಿ:ರಾಜ್ಯಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ :ಅರ್ಜಿ ಆಹ್ವಾನ
ಉಡುಪಿ: ಪ್ರಸಕ್ತ ಸಾಲಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು–ವತಿಯಿಂದ ವಿವಿಧಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸಾಧಕರಿಂದ ರಾಜ್ಯಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರಕ್ಕೆ ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ,ಬೆಂಗಳೂರು, ದೂರವಾಣಿ ಸಂಖ್ಯೆ: 080-22213530 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೆಶಕರ ಕಚೇರಿ ಪ್ರಕಟಣೆ ತಿಳಿಸಿದೆ.