ಉಡುಪಿ:ಕನ್ನಡ ರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
ಉಡುಪಿ: ಕರ್ನಾಟಕ ಸಂಭ್ರಮ 50 ರ ಅಂಗವಾಗಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನುಅರ್ಥಪೂರ್ಣವಾಗಿ ಹಾಗೂ ವೈಭವಯುತವಾಗಿ ಆಚರಿಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಕೆ ಸೂಚನೆ ನೀಡಿದರು. ಅವರು ಬುಧವಾರ ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಕನ್ನಡ ರಾಜ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 69 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ನವೆಂಬರ್ 1 ರಂದು ಉಡುಪಿ ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, […]