ಉಡುಪಿ: ದೇವರ ಹೆಸರಲ್ಲಿ ಶಾಸಕ ಸುನಿಲ್ ಕುಮಾರ್ ರಾಜಕೀಯ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ.
ಉಡುಪಿ: ಕಾರ್ಕಳದ ಶಾಸಕ ಸುನಿಲ್ ಕುಮಾರ್ ಅವರು ದೇವರ ಹೆಸರಿನಲ್ಲಿ ರಾಜಕೀಯ ಮಾಡಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಮೋಸ ಮಾಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರು ಬಿದ್ದರೂ ಮೀಸೆ ಮಣ್ಣಾಗಿಲ್ಲ ಎಂಬ ಭಾವನೆಯಲ್ಲಿದ್ದಾರೆ. ದೇವರ- ರಾಮನ ಹೆಸರಲ್ಲಿ ರಾಜಕೀಯ ಮಾಡುತ್ತಿದ್ದವರು, ಈಗ ಭಗವಂತನಿಗೆ ಮೋಸ ಮಾಡಿದ್ದಾರೆ. ಮೂರ್ತಿ ಕಂಚಿನದ್ದೋ […]