ಫೆ.14,15: ಕರ್ಮಸಿದ್ಧಿ–2020’ ಅಂತರರಾಷ್ಟ್ರೀಯ ಸಮ್ಮೇಳನ

ಉಡುಪಿ: ಕುತ್ಪಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನ ಪಂಚಕರ್ಮ ಮತ್ತು ಜಾನಪದ ಸಂಶೋಧನಾ ಕೇಂದ್ರದ ಜಂಟಿ ಆಶ್ರಯದಲ್ಲಿ ಮಾತೃಶ್ರೀ ರತ್ನಮ್ಮ ಹೆಗ್ಗಡೆಯವರ ಜನ್ಮದಿನ ಅಂಗವಾಗಿ ಇದೇ 14 ಮತ್ತು 15ರಂದು ಕಾಲೇಜಿನ ಭಾವಪ್ರಕಾಶ ಸಭಾಂಗಣದಲ್ಲಿ ‘ಕರ್ಮಸಿದ್ಧಿ–2020’ ಎಂಬ ಅಂತರರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಸಮ್ಮೇಳನದ ಮುಖ್ಯ ಸಂಘಟನಾ ಕಾರ್ಯದರ್ಶಿ ಡಾ. ನಿರಂಜನ್‌ ರಾವ್‌ ಹೇಳಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು, ಈ ಎರಡು ದಿನಗಳ ಸಮ್ಮೇಳನದಲ್ಲಿ 1 ಸಾವಿರ ದೇಶ–ವಿದೇಶಗಳ ಸಂಶೋಧನಾ ವಿದ್ಯಾರ್ಥಿಗಳು, […]