ಉಡುಪಿ: ಕರ್ನ್ನಪಾಡಿ ರಥೋತ್ಸವ ಮುಂದೂಡಿಕೆ
ಉಡುಪಿ: ಇತಿಹಾಸ ಪ್ರಸಿದ್ಧ ಕನ್ನರ್ಪಾಡಿ ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮೇ 13 ರಿಂದ 18ರವರೆಗೆ ನಡೆಯಬೇಕಿದ್ದ ವಾರ್ಷಿಕ ರಥೋತ್ಸವವನ್ನು ಕೋವಿಡ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ. ಮುಂದಿನ ಸೂಕ್ತ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಶ್ರೀದೇವಳದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.